ಹಿಂದೂ ಪುರಾಣಗಳ ಆಧಾರದ ಮೇಲೆ.....2012 ಕ್ಕೆ ಅರ್ಥ ಇಲ್ಲ??!!! ಹೇಗೆ?
(ಇದಕ್ಕೆ.. ಬಲ್ಲವರು ಪೂರಕ ಮಾಹಿತಿ ಕೊಡಬಹುದು)
"ಅರೆ ಇವನ ಇವನ ಪ್ರಳಯದ ಸಂಶಯ ನಿವಾರಿಸಿ ಮೂರುದಿನ ಆಗಿಲ್ಲ ಇನ್ನೊಬ್ಬರನ್ನ ಕರೆತರ್ತಾ ಇದ್ದಾನಲ್ಲ...ಇವರೇನಾದ್ರೂ ಅವರ್ದ್ದೇ ತರ್ಕ ತಂದರೋ ಹೇಗೆ..? ಎ0ಮ್ದು ಕೊಳ್ಳುತ್ತಾ ರಾಮಣ್ಣ ತನ್ನ ಮನೆಕಡೆ ಬರುತ್ತಿದ್ದ ಗೋಪಾಲ ಮತ್ತು ಅವರ ಜೊತೆಯಿದ್ದವರನ್ನು ಬರ ಮಾಡಿಕೊಳ್ಳುತ್ತಾ...‘ಬರಪ್ಪಾ ಗೋಪಲ...ಬನ್ನಿ ಒಳಗ್ಬನ್ನಿ....ಅಂದಹಾಗೆ ಇವರು ಯಾರು ಗೊತ್ತಾಗಲಿಲ್ಲ..?‘
ರಾಮು ಇವರು ನಮ್ಮ ವೇದ ಪುರಾಣಗಳನ್ನು ಅಧ್ಯಯನ ಮಾಡ್ತಿರೋರು..ಇವರು ನಿನ್ನ ಮಾತು ಒಪ್ತಾರೆ..ಅಷ್ಟೇ ಅಲ್ಲ..ನಮ್ಮ ವೇದ ಪುರಾಣಗಳ ಪ್ರಕಾರ ಇದು ಕೇವಲ ಯುಗದ ಪ್ರಾರಂಭ ಆಗಿರೋಕೆ ಸಾಧ್ಯ ಅನ್ತಿದ್ದಾರೆ...ಅದೂ ನಮ್ಮ ಯುಗದ್ದಲ್ಲ..ಮಾಯನ್ ಯುಗದ್ದು..ನಮ್ಮ ಪ್ರಕಾರ ಯುಗ ಮುಗಿಯೋಕೆ...ಇನ್ನೂ ದೂರ ಇದೆ...ಪ್ರಳಯ ಹಾಗಿರ್ಲಿ...ಅಂತಾರೆ....ಅಂದಹಾಗೆ ಇವರು ವಿದ್ವಾನ್ ಸಿದ್ಧರಾಮ್. ಎಂದು ತನ್ನ ಜೊತೆಯಿದ್ದವರನ್ನು ರಾಮಣ್ಣನಿಗೆ ಪರಿಚಯಿಸಿದ.
ಸರ್ ನೀವೊಬ್ಬ scientist ಅಂತ ಹೇಳಿದ್ರು ಗೋಪಾಲ್ ..ಹಾಗೇ ಇವರ ಪ್ರಳಯದ ಬಗ್ಗೆ ಎದ್ದಿರುವ ಊಹಾ ಪೋಹಾ ನಿಜವಲ್ಲ ಅಂತ ಹೇಳಿದ್ದಿರಂತೆ...ಎಂದರು ವಿದ್ವಾನ್
ನೋಡಿ ನನ್ನ ಅಧ್ಯಯನ ಈಗಷ್ಟೇ ಪ್ರಾರಂಭವಾಗಿದೆ ನನಗೆ ತಿಳಿದಿರುವುದನ್ನು ಹೇಳ್ತೇನೆ...
ನಮ್ಮ ವೇದ-ಪುರಾಣಗಳ ಪ್ರಕಾರ...ಬ್ರಹ್ಮ ನಮ್ಮ ಸೃಷ್ಠಿಕರ್ತ...ಇಡೀ ಬ್ರಹ್ಮಾಂಡದ ಸೃಷ್ಠಿಕರ್ತ ಎಂದೇ ಹೇಳಬೇಕು. ಅಲ್ಲವೇ?
ಹೌದು...ಎಂದು ಗೋಣು ಹಾಕಿದರು ರಾಮಣ್ಣ ಮತ್ತು ಗೋಪಾಲ್ ..
ಮುಂದುವರಿದ ವಿದ್ವಾನರು...
ಮಾಯನ್ ಪ್ರಕಾರ ಅವರ ಪಂಚಾಂಗ 2012 ಕ್ಕೆ ಕೊನೆಯಾದರೆ ಬೇರೆ ಯುಗ ಪ್ರಾರಂಭವಾಗಬೇಕು...ಅದು ಪ್ರಳಯ ಅನ್ನುವುದಾದರೆ...ಮನುಕುಲದ ಸಮಾಪ್ತಿ ಎಂದಾಯಿತು...ಆದರೆ ಹಿಂದೂ ಪುರಾಣಗಳ ಪ್ರಕಾರ ಇದು ಅಸಾಧ್ಯ..ಇದು ಕೇವಲ ಒಂದು ಯುಗದ (ಮಾಯನ್) ಅಂತ್ಯ ಮತ್ತು ಮತ್ತೊಂದರ ಪ್ರಾರಂಭ...!!!
ಹೇಗೆ??
ಇದರ ಪ್ರಕಾರ ಬ್ರಹ್ಮನ ಆಯಸ್ಸು 100 ಭ್ರಹ್ಮ ವರ್ಷಗಳು. ಬ್ರಹ್ಮನ ವರ್ಷದ ಒಂದುದಿನವನ್ನು ‘ಕಲ್ಪ‘ ಎನ್ನುತ್ತೇವೆ...ಇದರ ಅವಧಿ 4.32 ದಶಕೋಟಿ ವರ್ಷಗಳು (ಇದು ಪೃಥ್ವಿಯ ಆಯಸ್ಸಿಗೆ ಸಮ). ಪ್ರತಿ ಕಲ್ಪದಲ್ಲಿ (ಆತನ ಒಂದು ದಿನ) ಬ್ರಹ್ಮ ಹದಿನಾಲ್ಕು ಮನು ವಂಶಗಳನ್ನು ಸೃಷ್ಠಿಸುತ್ತಾನಂತೆ. ಒಂದು ಮನು ವಂಶ (ಮನ್ವಂತರ) ಎಪ್ಪತ್ತೊಂದು ಚತುರ್ಯುಗಗಳನ್ನು ಹೊಂದಿರುತ್ತದಂತೆ...ಚತುರ್ಯುಗಗಳು ಅಂದರೆ ಸತ್ಯ, ತ್ರೇತ, ದ್ವಾಪರ ಮತ್ತು ಕಲಿ.
ಸತ್ಯಯುಗ - 1,728,000 ಮಾನವ ವರ್ಷಗಳ ಅವಧಿ ಹೊಂದಿರುತ್ತೆ
ತ್ರೇತ ಯುಗ- 1,296,000 ಮಾ.ವ.
ದ್ವಾಪರ ಯುಗ- 864,000 ಮಾ.ವ.
ಕಲಿಯುಗ - 432,000 ಮಾ.ವ.
ನಮ್ಮ ಆರ್ಯಭಟನ ಪ್ರಕಾರ ಕಲಿಯುಗ ಪ್ರಾರಂಭವಾಗಿದ್ದು 3102 ಕ್ರಿಸ್ತ ಪೂರ್ವ ಅಂದರೆ 3102+2009=5111 ವರ್ಷ ಕಳೆದಿದೆ. ಅಂದರೆ ಕಲಿಯುಗದ 432,000 ವರ್ಷ ಅವಧಿಯಲ್ಲಿ ನಾವು ಕಳೆದಿರುವುದು ಕೇವಲ 5111 ವರ್ಷ ಅಂದರೆ ಯುಗಾಂತ್ಯಕ್ಕೆ ಇನ್ನೂ 427,889 ವರ್ಷ ಇದೆ ನಂತರ ಒಂದು ಚತುರ್ಯುಗ ಮುಗಿದಂತೆ. ಈಗ ನಡೆಯುತ್ತಿರುವ ಮನು ವಂಶ ಏಳನೇ ಮನುವಂಶ ಇದಕ್ಕೆ ವೈಸ್ವತ್ ಮನುವಂಶ ಎನ್ನುತ್ತಾರೆ. ಹೀಗೆ ಹದಿನಾಲ್ಕು ಮನು ವಂಶಕಾಲ ಮುಗಿದ ಮೇಲೆ ಪ್ರಳಯ...!!!! ಅಂದ್ರೆ ಕಲಿಯುಗದ ಉಳಿದಿರುವ 427,889 ವರ್ಷದ ನಂತರ ಇನ್ನೂ ಏಳು ಮನುವಂಶಗಳು ಉಳಿದಿವೆ..ಪ್ರತಿ ಮನು ವಂಶಕ್ಕೆ 71 ಚತುರ್ಯುಗಗಳು ಅಂದರೆ 71 x 7 = 497 ಚತುರ್ಯುಗಗಳು. ಒಂದು ಚತುರ್ಯುಗ = 4,320,000 ವರ್ಷ ಅಂದರೆ ಉಳಿದಿರುವ 497 ಚತುರ್ಯುಗಕ್ಕೆ ತಗಲುವ ಅವಧಿ 2,147,040,000 ವರ್ಷ...!!!!! ಅಲ್ಲಿಗೆ ಬ್ರಹ್ಮನ ಒಂದು ದಿನ (ಕಲ್ಪ) ಮುಗಿಯುತ್ತೆ ಅಂದರೆ ಪ್ರಳಯ, ಬ್ರಹ್ಮ ನಿದ್ರಿಸುತ್ತಾನೆ..ಬೆಳಗೆದ್ದು ಮತ್ತೊಂದು ಸೃಷ್ಠಿ ಅಂದರೆ 14 ಮನುವಂಶಗಳು...ಹೀಗೆ ಬ್ರಹ್ಮನ ೧೦೦ ವರ್ಷ..ಒಬ್ಬ ಬ್ರಹ್ಮನ ಪತನ ಮತ್ತೊಬ್ಬನ ಉಗಮ...
ಯಾವುದಕ್ಕೆ ಅಂತ್ಯ? ಯಾರದ್ದು ಅಂತ್ಯ? ವಿಚಾರ ವೈಶಾಲ್ಯತೆಯ ಆಧಾರಕ್ಕೆ ಬಂದರೆ 2012..ಅಂದರೆ ಇನ್ನು ಉಳಿದಿರುವ ಮೂರು ವರ್ಷ...ಉಳಿದಿರುವ ಕಲಿಯುಗದ ಅವಧಿಯಲ್ಲಿ ತೃಣಮಾತ್ರ!!!